ಅಭಿಪ್ರಾಯ / ಸಲಹೆಗಳು

ಯೋಜನೆಗಳು

ಕ್ರ.ಸಂ                            ಯೋಜನೆಗಳ ವಿವರ                ವೀಕ್ಷಿಸಿ
                                                                                                          ಕೃಷಿ ಮಾರಾಟ ಇಲಾಖೆ

2021-22ನೇ ಸಾಲಿನ ಆಯವ್ಯಯ ಘೋಷಣೆಗಳ ಕುರಿತು ಆಗಿರುವ ಪ್ರಗತಿಯ ವಿವರ

    ವಿವರ

 ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ

ರೈತ ಸಂಜೀವಿನಿ ಅಪಘಾತ ಯೋಜನೆ

       ರೈತ ಕೃಷಿ ಹಾಗೂ ಮಾರಾಟ ಚಟುವಟಿಕೆಗಳಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಮೃತಪಟ್ಟ ಅಥವಾ ಅಂಗವೈಕಲ್ಯಕ್ಕೆ ಒಳಗಾದ ಸಂದರ್ಭದಲ್ಲಿ ಈ ಯೋಜನೆಯಡಿ ಪರಿಹಾರ ನೀಡಲಾಗುವುದು.

        ರೈತ ಕುಟುಂಬದವರಿಗೆ ಆರ್ಥಿಕ ಸಹಾಯ  ನೀಡುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.

          ಈ ಯೋಜನೆಯಡಿ ರೈತ ಮೃತಪಟ್ಟಾಗ ರೂ. ೧.೦೦ ಲಕ್ಷ ಹಾಗೂ ಅಂಗವೈಕಲ್ಯಕ್ಕೊಳಗಾದಾಗ ರೂ.೧೦,೦೦೦/- ರಿಂದ ರೂ.೫೦,೦೦೦/- ರವರೆಗೆ ಪರಿಹಾರ ಪಡೆಯಲು ಅವಕಾಶವಿರುತ್ತದೆ.  ಹೆಚ್ಚಿನ ಮಾಹಿತಿಗಾಗಿ...  

    ವೀಕ್ಷಿಸಿ
    ಕಾಯಕ ನಿಧಿ  ಯೋಜನೆ:

            ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಲೈಸೆನ್ಸ್ ಪಡೆದು ಕಾರ್ಯನಿರ್ವಹಿಸುತ್ತಿರುವ ಹಮಾಲರಿಗೆ ಕೃಷಿ ಮಾರಾಟ ಮಂಡಳಿ ವತಿಯಿಂದ ೨೦೧೪-೧೫ ನೇ ಸಾಲಿನಿಂದ ಕಾಯಕನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ.

            ಸದರಿ ಯೋಜನೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಲೈಸೆನ್ಸ್ ಪಡೆದು ಕಾರ್ಯನಿರ್ವಹಿಸುತ್ತಿರುವ ಹಮಾಲರು/ಶ್ರಮಿಕರು ಮೃತರಾದಾಗ ಶವಸಂಸ್ಕಾರಕ್ಕಾಗಿ ಹಾಗೂ ವೈದ್ಯಕೀಯ ವೆಚ್ಚಕ್ಕಾಗಿ ಪರಿಹಾರ ಧನ ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ...   

 
 ೩  

ಕನಿಷ್ಟ ಬೆಂಬಲ ಬೆಲೆ ಯೋಜನೆ 

ರಾಜ್ಯದಲ್ಲಿ ಕೃಷಿ ಕ್ಷೇತ್ರವನ್ನು ಸಮರ್ಥನೀಯವಾಗಿ ಬಲಪಡಿಸುವ ಹಾಗೂ ಕೃಷಿ ಕ್ಷೇತ್ರದಲ್ಲಿ ಸ್ಥಿರತೆಯನ್ನು ಕಾಪಾಡುವ ದೃಷ್ಟಿಯಿಂದ ಮತ್ತು ರಾಜ್ಯದ  ರೈತರು ಕೃಷಿ ಉತ್ಪನ್ನಗಳ ಬೆಲೆ ಕುಸಿತ ಸಂದರ್ಭದಲ್ಲಿ ಹತಾಶರಾಗಿ ತಮ್ಮ  ಕೃಷಿ/ತೋಟಗಾರಿಕಾ ಉತ್ಪನ್ನಗಳನ್ನು ಮಾರಾಟ ಮಾರಾಟ ಮಾಡುವುದನ್ನು ತಡೆಯುವ ದೃಷ್ಟಿಯಿಂದ ರೈತರ ಹಿತ ಕಾಪಾಡಲು ಫ್ಲೋರಪ್ರೈಸ್ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೆ ತರಲಾಗಿದೆ.   ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ( ನಿಯಂತ್ರಣ ಮತ್ತು ಅಭಿವೃದ್ಧಿ) ಶಾಸನ ೧೯೬೬ರನ್ವಯ ಸದರಿ ಯೋಜನೆಯ ರಾಜ್ಯದಲ್ಲಿ  ಬೆಳೆಯಲಾಗುವ ಎಲ್ಲಾ ಅಧಿಸೂಚಿತ ಕೃಷಿ/ತೋಟಗಾರಿಕಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ. ಸ್ದರಿ ಯೋಜನೆಯ ಜೊತೆಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯೂ ಸಹ ಅನುಷ್ಟಾನದಿಂದ  ಮಾರುಕಟ್ಟೆಯಲ್ಲಿ  ಧಾರಣೆಯು  ಸ್ಥಿರತೆ ಹೊಂದಿ ರೈತರಿಗೆ ಉತ್ತಮ ಧಾರಣೆ ದೊರೆತು ರೈತರು ಒತ್ತಡದಿಂದ ಹತಾಶರಾಗಿ ಕಡಿಮೆ ಧಾರಣೆಗೆ ಮಾರಾಟ ಮಾಡುವುದನ್ನು ತಪ್ಪಿಸಲು ಈ ಯೋಜನೆಯು ಸಹಾಯಕವಾಗಿರುತ್ತದೆ.

 ಫ್ಲೋರಪ್ರೈಸ್ ಯೋಜನೆಯನ್ನು ಪ್ರಥಮ ಬಾರಿಗೆ ದಿನಾಂಕ:24.11.1999 ರಿಂದ ಜಾರಿಗೆ ತರಲಾಗಿದೆ. ಸದರಿ ಯೋಜನೆಯ ಯಶಸ್ವಿ ಅನುಷ್ಟಾನಕ್ಕಾಗಿ ಆವರ್ತನಿಧಿಯನ್ನು ಸ್ಥಾಪಿಸಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ( ನಿಯಂತ್ರಣ ಮತ್ತು ಅಭಿವೃದ್ಧಿ)  ಹಾಗೂ ರಾಜ್ಯ ಸರ್ಕಾರದಿಂದ  ರಚನೆಯಾಗಿರುವ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಚಿವ ಸಂಪುಟ ಉಪ ಸಮಿತಿಯ ತೀರ್ಮಾನದಂತೆ ಆವರ್ತನಿಧಿ ಖಾತೆಯ ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯು ನಿರ್ವಹಿಸುತ್ತಿದೆ.

 

 

 

 

ಇತ್ತೀಚಿನ ನವೀಕರಣ​ : 23-09-2022 12:20 PM ಅನುಮೋದಕರು: Approver krishimaratavahini



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷಿ ಮಾರಾಟ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080